ವಿದೇಶ
Trending

ಭಾರತ-ಪಾಕಿಸ್ತಾನ ಉದ್ವಿಗ್ನ, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮಹತ್ವದ ಸಭೆ

ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು, ವಿಶ್ವಸಂಸ್ಥೆ ಭದ್ರತಾ ಮಂಡಳಿಯು ಇಂದು (ಮೇ 5-ಸೋಮವಾರ) ಸಭೆ ನಡೆಸಲಿದೆ. ಪಾಕಿಸ್ತಾನದ ಮನವಿಯ ಮೇರೆಗೆ ಗ್ರೀಸ್ ದೇಶದ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ನಡೆಸಲಾಗುವುದು ಎಂದು ವಿಶ್ವಸಂಸ್ಥೆ ಮೂಲಗಳು ಖಚಿತಪಡಿಸಿವೆ.

ಪಹಲ್ಗಾಮ್‌ ದಾಳಿ ಬಳಿಕ ಭಾರತವು ಪಾಕಿಸ್ತಾನದೊಂದಿಗಿನ ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.ಭಾರತದ ಈ ನಿರ್ಧಾರವನ್ನು ಟೀಕಿಸಿರುವ ಪಾಕಿಸ್ತಾನ, ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ವಿಶ್ವಸಂಸ್ಥೆಗೆ ಮಾಹಿತಿ ನೀಡಲು ನಿರ್ಧರಿಸಿದೆ. ಈ ಸಭೆಯಲ್ಲಿ, ಐದು ಖಾಯಂ ಸದಸ್ಯರು ಮತ್ತು 10 ಖಾಯಂ ಅಲ್ಲದ ಸದಸ್ಯರು ಭಾಗವಹಿಸಲಿದ್ದಾರೆ. ರಷ್ಯಾ, ಯುಕೆ, ಅಮೆರಿಕ, ಚೀನಾ ಮತ್ತು ಫ್ರಾನ್ಸ್ ಈ ಐದು ಖಾಯಂ ಸದಸ್ಯ ರಾಷ್ಟ್ರಗಳು.

ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ ಗ್ರೀಸ್‌ನ ಖಾಯಂ ಪ್ರತಿನಿಧಿ ಮತ್ತು ರಾಯಭಾರಿ ಇವಾಂಜೆಲೋಸ್ ಸೆಕೆರಿಸ್ ಪ್ರತಿಕ್ರಿಯಿಸಿದ್ದಾರೆ. “ಇದು ಒಂದು ಗಂಭೀರ ವಿಷಯ. ನಾವು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಖಂಡಿಸುತ್ತೇವೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ನಮಗೆ ಕಾಳಜಿ ಇದೆ” ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನವು ವಿಶ್ವಸಂಸ್ಥೆ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಚ್ಚರಿಸಿರುವ ಭಾರತ, ಭದ್ರತಾ ಮಂಡಳಿಯ ಎಂಟು ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ನಿರಾಕರಿಸಿದೆ. ಅಲ್ಲದೇ, ತಟಸ್ಥ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಪಹಲ್ಗಾಮ್ ದಾಳಿಯ ನಂತರ, ಭಾರತವು ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳನ್ನು ವಾಪಸ್ ಕಳುಹಿಸಿದೆ. ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ರದ್ದುಗೊಳಿಸಿದೆ. ಅದೇ ರೀತಿ ಅಟ್ಟಾರಿ ಗಡಿ ಭಾಗವನ್ನು ಸಂಪೂರ್ಣವಶಗಿ ಮುಚ್ಚಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನ ಕೂಡ ಭಾರತೀಯ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದೆ. ಭಾರತದೊಂದಿಗಿನ ವ್ಯಾಪಾರವನ್ನು ಸ್ಥಗಿತಗೊಳಿಸಿದೆ. ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ರದ್ದುಗೊಳಿಸಿರುವುದನ್ನು ಪಾಕಿಸ್ತಾನ ವಿರೋಧಿಸಿದೆ. ಅಲ್ಲದೇ ನೀರನ್ನು ತಡೆದರೆ ಅದನ್ನು ಯುದ್ಧವೆಂದು ಪರಿಗಣಿಸುವುದಾಗಿ ಎಚ್ಚರಿಕೆ ನೀಡಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಈ ವಿಷಯದ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿಯು ಸಭೆ ನಡೆಸುತ್ತಿದೆ. ಗ್ರೀಸ್ ದೇಶವು ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಐದು ಖಾಯಂ ಸದಸ್ಯರು ಮತ್ತು 10 ಖಾಯಂ ಅಲ್ಲದ ಸದಸ್ಯರು ಇರುತ್ತಾರೆ. ಚೀನಾ, ಫ್ರಾನ್ಸ್, ರಷ್ಯಾ, ಯುಕೆ ಮತ್ತು ಅಮೆರಿಕ ಈ ಐದು ದೇಶಗಳು ಖಾಯಂ ಸದಸ್ಯ ರಾಷ್ಟ್ರಗಳು. ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ದಕ್ಷಿಣ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ಸೊಮಾಲಿಯಾ ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳು. ಮೇ ತಿಂಗಳಲ್ಲಿ ಗ್ರೀಸ್ ಈ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಹೊಂದಿದೆ.


Related Articles

Leave a Reply

Your email address will not be published. Required fields are marked *

Back to top button