Country
Trending

ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ

ನವದೆಹಲಿ: ಈ ವರ್ಷ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಈ ವರ್ಷದ ಮಾನ್ಸೂನ್ (Monsoon 2025) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಭಾರತ ಹವಾಮಾನ ಇಲಾಖೆ (ಐಎಂಡಿ) ದೀರ್ಘಾವಧಿಯ ಸರಾಸರಿಯ 105% ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.ಐಎಂಡಿ ಪ್ರಕಾರ, ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೂಚಿಸಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

“4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ” ಎಂದು ಭಾರತ ಹವಾಮಾನ ಇಲಾಖೆ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button