ಇತ್ತೀಚಿನ ಸುದ್ದಿ
Trending

ಕೆಸಿ ವೇಣುಗೋಪಾಲ್, ಸುರ್ಜೇವಾಲ ಜತೆ ಸಿಎಂ, ಡಿಸಿಎಂ ಪ್ರತ್ಯೇಕ ಚರ್ಚೆ!

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಚರ್ಚೆ ನಡೆಸಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ ‘ಜೈ ಹಿಂದ್’ ಸಭಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ ಇಬ್ಬರು ಎಐಸಿಸಿ ನಾಯಕರು ಆಗಮಿಸಿದ್ದರು.ಮಂಗಳವಾರ ರಾತ್ರಿಯೇ ನಗರಕ್ಕೆ ಆಗಮಿಸಿದ್ದ ಎಐಸಿಸಿ ನಾಯಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇವರಷ್ಟೇ ಅಲ್ಲದೆ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡಾ ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆ ಮತ್ತು ಇ.ಡಿ ದಾಳಿಯ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರಕ್ಕೆ ಎರುಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾಚರನೆ ಹಾಗೂ ಸಿಎಂ ಬದಲಾವಣೆ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಈ ಪ್ರತ್ಯೇಕ ಮಾತುಕತೆಗಳು ಚರ್ಚೆಗೆ ಗ್ರಾಸವಾಗುತ್ತಿವೆ. ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಸಿಎಂ ಮತ್ತು ಡಿಸಿಎಂ ನಡುವೆ ಭಿನ್ನ ಅಭಿಪ್ರಾಯಗಳು ಇವೆ. ಕೆಲವೊಮ್ಮೆ ಇದು ಬಹಿರಂಗವಾಗುತ್ತಲೂ ಇವೆ.

ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆ ಆಗಬೇಕು ಎಂಬ ಬೇಡಿಕೆ ಇದೆ. ಸಾಕಷ್ಟು ಆಕಾಂಕ್ಷಿಗಳು ಸಂಪುಟ ಸೇರ್ಪಡೆಗೊಳ್ಳಲು ಕಾಯುತ್ತಿದ್ದಾರೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬುವುದು ಸದ್ಯಕ್ಕೆ ಕುತೂಹಲವಾಗಿದೆ.ಸಂಪುಟದಲ್ಲಿ ಬದಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಹಮತ ಇದೆ. ಆದರೆ ಎರಡುವರೆ ವರ್ಷದ ಬಳಿಕ ಸಂಪುಟ ಪುನಾರಚನೆ ಆಗಲಿ ಎಂಬುವುದು ಸಿದ್ದರಾಮಯ್ಯ ಬಯಕೆಯಾಗಿದೆ. ಆದರೆ ಡಿಕೆ ಶಿವಕುಮಾರ್ ಮಾತ್ರ ಈಗಲೇ ಆಗಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸರ್ಕಾರದ ಕೆಲಸ ಕಾರ್ಯಗಳ ಬಗ್ಗೆಯೂ ಸಂಕ್ಷಿಪ್ತವಾದ ವಿವರವನ್ನು ಎಐಸಿಸಿ ನಾಯಕರಿಗೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ. ಅಲ್ಲದೆ ರಾಜ್ಯದಲ್ಲಿ ನಡೆಯುತ್ತಿರುವ ಕೆಲವೊಂದು ಆಂತರಿಕ ಬೆಳವಣಿಗೆಗಳ ಬಗ್ಗೆಯೂ ಈ ಭೇಟಿ ಸಂದರ್ಭದಲ್ಲಿ ಚರ್ಚೆ ಆಗಿರುವ ಸಾಧ್ಯತೆ ಇದೆ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ಈ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆ ಇದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆಯೂ ಇದೆ. ಆದರೆ ಅಧಿಕೃತ ದಿನಾಂಕ ಇನ್ನೂ ನಿಗದಿಯಾಗಿಲ್ಲ.


Related Articles

Leave a Reply

Your email address will not be published. Required fields are marked *

Back to top button