ಕ್ರೈಂ
Trending

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಹದ್ದಿನ ಕಣ್ಣು!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಸಮಾಜದಲ್ಲಿ ಕೋಮು ಕ್ಷೋಭೆಗೆ ಪ್ರಯತ್ನಿಸುತ್ತಿರುವವ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಕಳೆದ ಮೂರು ವರ್ಷದಲ್ಲಿ 281 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾದರೆ, ಬೆಂಗಳೂರು ನಗರದಲ್ಲಿ 47 ಪ್ರಕರಣಗಳು ದಾಖಲಾಗಿದೆ.2023 ರಲ್ಲಿ 115 ಪ್ರಕರಣಗಳು ದಾಖಲಾದರೆ, 2024 ರಲ್ಲಿ 148 ಪ್ರಕರಣಗಳು ದಾಖಲಾಗಿವೆ. ಇನ್ನು 2025 ರಲ್ಲಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಮೂಲಕ ಒಟ್ಟು 3 ವರ್ಷಗಳಲ್ಲಿ 281 ಪ್ರಕರಣಗಳು ಈ ಸಂಬಂಧ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ತಡೆಗಟ್ಟಲು ಕ್ರಮ ಏನು?

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸ ಕೋಮು ಪ್ರಚೋದನೆ ಮಾಡುವವರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾ ಮಾನೀಟರಿಂಗ್ ಸೆಲ್‌ ತೆರೆಯಲಾಗಿದೆ. ಈ ಸೆಲ್ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಗಾವಲು ಇಟ್ಟು ದುಷ್ಕೃತ್ಯ ಎಸಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿದೆ. ಪೊಲೀಸ್ ಅಧಿಕೃತ ಖಾತೆಗಳಾದ ಫೇಕ್ ಬುಕ್, ಎಕ್ಷ್, ಇಸ್ಟ್ರಾಗ್ರಾಮ್, ವಾಟ್ಸಪ್‌ ಗಳ ಮೂಲಕ ಸಾರ್ವಜನಿಕರಲ್ಲಿ ಈ ಕುರಿತಾಗಿ ಅರಿವು ಮೂಡಿಸುವ ಪ್ರಯತ್ನ ನಡೆಸುತ್ತಿದೆ.

ಫ್ಯಾಕ್ಟ್ ಚೆಕ್

ಇನ್ನು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕೆ ಎಸ್ ಪಿ ಫ್ಯಾಕ್ಟ್ ಚೆಕ್ ಆಪ್ ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ನೈಜ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಹಂಚಿಕೊಳ್ಳಲಾಗುತ್ತಿದೆ ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button