ಕ್ರೈಂ
Trending

ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತದೇ ಬಾಲಕಿಯ ಅಪಹರಿಸಿದ ವ್ಯಕ್ತಿ

ಉತ್ತರ ಪ್ರದೇಶ, ಮಾರ್ಚ್​ 28:  ಬಾಲಕಿಯೊಬ್ಬಳನ್ನು ಅಪಹರಿಸಿ  ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ ಮತ್ತದೇ ಹುಡುಗಿಯಯನ್ನು ಅಪಹರಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿಯೊಬ್ಬ ಮತ್ತದೇ ಬಾಲಕಿಯನ್ನು ಅಪಹರಿಸಿದ್ದಾನೆ. ಅಪಹರಣದ ನಂತರ ಪೊಲೀಸರು ಪ್ರಕರಣದ ಕುರಿತು ಹೊಸ ತನಿಖೆ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ವರದಿಯ ಪ್ರಕಾರ, ಆರೋಪಿಯನ್ನು ಬಂಧಿಸಲು ಮತ್ತು 15 ವರ್ಷದ ಬಾಲಕಿಯನ್ನು ರಕ್ಷಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆ ವ್ಯಕ್ತಿ ತನ್ನ ಪೋಷಕರು ಮತ್ತು ಸಂಬಂಧಿಕರ ಸಹಾಯದಿಂದ ಈ ಅಪರಾಧವನ್ನು ಮಾಡಿದ್ದಾನೆ ಎಂದು ನಂಬಲಾಗಿದೆ. ಬಾಲಕಿಯ ತಾಯಿ ಭದೋಹಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಪ್ರಕಾರ, 23 ವರ್ಷದ ಆಶಿಶ್ ಸರೋಜ್ ಎನ್ನುವ ಆರೋಪಿ ಮಾರ್ಚ್ 22 ರಂದು ತನ್ನ ಪೋಷಕರು ಮತ್ತು ಪುರುಷ ಸಂಬಂಧಿಯ ಸಹಾಯದಿಂದ ಬಾಲಕಿಯನ್ನು ಅಪಹರಿಸಿದ್ದಾನೆ.ಕಳೆದ ತಿಂಗಳಷ್ಟೇ ಅದೇ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನಿಗೆ ಜಾಮೀನು ಸಿಕ್ಕಿದೆ. ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ನಾವು ಸರೋಜ್, ಅವರ ಪೋಷಕರು ಮತ್ತು ಪುರುಷ ಸಂಬಂಧಿಯ ವಿರುದ್ಧ ಅಪಹರಣದ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂತ್ರಸ್ತೆಯನ್ನು ಪತ್ತೆಹಚ್ಚಲು ನಾವು ತಂಡಗಳನ್ನು ರಚಿಸಿದ್ದೇವೆ ಮತ್ತು ಸರೋಜ್ ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಹಿನ್ನೆಲೆ ಏನು? 2024 ರ ಏಪ್ರಿಲ್​ 5 ರಂದು 15 ವರ್ಷದ ಬಾಲಕಿಯನ್ನು ಅಪಹರಿಸಿ ಮೂರು ತಿಂಗಳ ಕಾಲ ಬಂಧಿಯಾಗಿರಿಸಿದ್ದ, ಆಕೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದ. ಜುಲೈನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿದ್ದರು ಮತ್ತು ಸರೋಜ್​ನನ್ನು ಬಂಧಿಸಿದ್ದರು.ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ ಮತ್ತು ಅಪಹರಣದ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನನ್ನು ಜೈಲಿಗೆ ಹಾಕಲಾಯಿತು. ಈ ವರ್ಷದ ಫೆಬ್ರವರಿಯಲ್ಲಿ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.ಇದೀಗ ಮತ್ತೆ ಆಕೆಯನ್ನು ಅಪಹರಿಸಿದ್ದಾನೆ.

Related Articles

Leave a Reply

Your email address will not be published. Required fields are marked *

Back to top button