Country
Trending

ಪಾಕ್​ನಿಂದ ಗಡಿಯಲ್ಲಿ ಗುಂಡಿನ ದಾಳಿ, ಭಾರತೀಯ ಸೇನೆಯಿಂದ ಪ್ರತಿದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​(Pahalgam)ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಪಾಕಿಸ್ತಾನವು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಗೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದೆ. ಸತತ ಆರನೇ ದಿನವೂ ರಾತ್ರಿ ಗಡಿಯಲ್ಲಿ ಪಾಕ್​ ಸೇನೆ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಿ ಪಡೆಗಳಿಗೆ ಸೂಕ್ತ ಉತ್ತರ ನೀಡಿದೆ.

ಪಾಕ್ ಸೇನೆಯು ಏಪ್ರಿಲ್ 29-30ರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಸೆಕ್ಟರ್‌ಗಳ ಎದುರು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದ್ದವು. ಭಾರತೀಯ ಸೇನಾ ಪಡೆಗಳು ತ್ವರಿತವಾಗಿ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸ್ಥಳೀಯ, 25 ಪ್ರವಾಸಿಗರು ಸೇರಿ 26 ಮಂದಿಸಾವನ್ನಪ್ಪಿದ್ದರು. ಇದಾದ ನಂತರ , ನಂತರ ಎರಡೂ ನೆರೆಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಇತ್ತೀಚಿನ ಬೆಳವಣಿಗೆ ಸಂಭವಿಸಿದೆ.ಮಂಗಳವಾರ, ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದ ಜೊತೆಗೆ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿವೆ. ಈ ಪ್ರಚೋದನೆಗಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿತು ಮತ್ತು ಅಟ್ಟಾರಿ ಗಡಿಯನ್ನು ಸಂಚಾರಕ್ಕೆ ಮುಚ್ಚಿತು, ಆದರೆ ಪಾಕಿಸ್ತಾನವು 1972 ರ ಪಾಕ್-ಸಿಮ್ಲಾ ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. 24-36 ಗಂಟೆಯೊಳಗೆ ಭಾರತ ನಮ್ಮ ಮೇಲೆ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಭಾರತ ಮಿಲಿಟರಿ ದಾಳಿಯನ್ನು ಯೋಜಿಸುತ್ತಿದೆ ಎಂದು ಸೂಚಿಸುವ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯನ್ನು ನಾವು ಹೊಂದಿದ್ದೇವೆ ಎಂದು ಪಾಕ್ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್​ ಈ ದಾಳಿ ಹೊಣೆಯನ್ನು ಹೊತ್ತುಕೊಂಡಿತ್ತು. ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಡೆಬ್​ಸೈಟ್​ ಯಾರೋ ಹ್ಯಾಕ್ ಮಾಡಿದ್ದಾರೆ, ನಾವು ಈ ದಾಳಿ ನಡೆಸಿಲ್ಲ ಎಂದು ಹೇಳಿಕೆ ನೀಡಿತ್ತು.ಇದೀಗ ಭಾರತ ಏನು ಮಾಡಬಹುದು ಎನ್ನುವ ಭಯದಲ್ಲಿ ಪಾಕಿಸ್ತಾನವಿದ್ದು, ಮುಂದಿನ 36 ಗಂಟೆಯೊಳಗೆ ದಾಳಿ ನಡೆಸಬಹುದು ಎಂದು ಹೆದರಿ ಕುಳಿತಿದೆ. ಭಾರತೀಯ ಸೇನಾ ದಾಳಿಯ ಬೆದರಿಕೆ ಪಾಕಿಸ್ತಾನ ಸೇನೆಯೊಳಗೆ ಅವ್ಯವಸ್ಥೆಯನ್ನು ಹುಟ್ಟುಹಾಕಿದೆ ಎಂದು ವರದಿಯಾಗಿದೆ.

Related Articles

Leave a Reply

Your email address will not be published. Required fields are marked *

Back to top button