ನಗರಸಭೆ
Trending

ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ, ಕಾಂಗ್ರೆಸ್ ಜನವಿರೋಧಿ ನೀತಿಯ ವಿರುದ್ಧ ನಮ್ಮ ಹೋರಾಟ

ಮೈಸೂರು: ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಕಾಂಗ್ರೆಸ್ ಜನವಿರೋಧಿ ನೀತಿಯ ವಿರುದ್ಧ ನಮ್ಮ ಹೋರಾಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಸೋಮವಾರ ಮಾತನಾಡಿದ ಅವರು, ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುವ ಕಾರ್ಯ. ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದರು.ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು.

ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು.

ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಇದು ನಮ್ಮ ಪಕ್ಷದ ಹೋರಾಟ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ಹೋರಾಟಕ್ಕೆ ಆಡಳಿತ ಪಕ್ಷದವರು ಗೌರವ ಕೊಡಬೇಕೆಂದು ನಿರೀಕ್ಷೆ ಮಾಡುವ ದಡ್ಡರು ನಾವಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಬಿಜೆಪಿ ಈಗ ವಿಶ್ವದ ಅತಿ ದೊಡ್ಡ ಪಕ್ಷವೆನಿಸಿದೆ. ದೇಶದಲ್ಲಿ 400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಎಂಥ ಪರಿಸ್ಥಿತಿ ಬಂದಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿಲ್ಲ. ಬಿಜೆಪಿ ಸುಭದ್ರವಾಗಿದೆ ಎಂದು ನುಡಿದರು.

ರಾಜ್ಯ ಸರ್ಕಾರ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು. ಇದೀಗ ಎರಡನೇ ಹಂತದ ಹೋರಾಟಕ್ಕೆ ಮುಂದಾಗಿದೆ. ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರದ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಬಳಿಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಿದ್ದ ಬಿಜೆಪಿ ಕಾರ್ಯರ್ತರು, ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.


Related Articles

Leave a Reply

Your email address will not be published. Required fields are marked *

Back to top button