ಕ್ರೀಡೆ
Trending

IPL 2025 RCB vs MI ಸಹೋದರರ ಸವಾಲ್

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಸಹೋದರರ ನಡುವಣ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಕೃನಾಲ್ ಪಾಂಡ್ಯ ಇದ್ದರೆ, ಮುಂಬೈ ಇಂಡಿಯನ್ಸ್ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರೆ.  ಹೀಗಾಗಿ ಇಂದಿನ ಪಂದವು ಅಣ್ತಮ್ಮಂದಿರ ನಡುವಣ ಕಾದಾಟವಾಗಿ ಗುರುತಿಸಿಕೊಂಡಿದೆ.ಇಬ್ಬರೂ ಆಟಗಾರರು ಈ ಹಿಂದೆ ಮುಂಬೈ ಇಂಡಿಯನ್ಸ್ ಪರ ಜೊತೆಯಾಗಿ ಆಡಿದ್ದರು. ಆ ಬಳಿಕ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದರೆ, ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು.ಇದೀಗ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ. ಇತ್ತ ಕಳೆದ ಬಾರಿ ಲಕ್ನೋ ಪರ ಆಡಿದ್ದ ಕೃನಾಲ್ ಪಾಂಡ್ಯ ಆರ್​ಸಿಬಿ ಜೊತೆ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಹೀಗಾಗಿ ಈ ವರ್ಷದ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಬಾರಿ ಗೆಲುವು ದಾಖಲಿಸಿದೆ. ಇನ್ನು ಆರ್​ಸಿಬಿ ತಂಡ ಮುಂಬೈ ವಿರುದ್ಧ ಗೆದ್ದಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ.ಇದಾಗ್ಯೂ ಕೊನೆಯ 6 ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅದರಲ್ಲೂ ಈ ಪಂದ್ಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಮುಂಬೈ ಇಂಡಿಯನ್ಸ್ ಕಡೆಯಿಂದಲೂ ಅಮೋಘ ಪ್ರದರ್ಶನ ಎದುರು ನೋಡಬಹುದು.

Related Articles

Leave a Reply

Your email address will not be published. Required fields are marked *

Back to top button