ವಿದೇಶ
Trending

ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್​​​ ಹಾಗೂ ಪಾಕ್ ಜತೆ ಮಾತುಕತೆ ನಡೆಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

ಭಾರತ ಮತ್ತು ಪಾಕಿಸ್ತಾನ (Pakistan, India) ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಅಮೆರಿಕ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ತೀವ್ರ ಮಾತುಕತೆಯನ್ನು ನಡೆಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ (Marco Rubio) ಅವರು ಇಂದು (ಮೇ.10) ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಮಾತನಾಡಿ ಭಾರತ ಮತ್ತು ಪಾಕಿಸ್ತಾನದ ನಡುವೆ ನೇರ ಸಂವಹನ ನಡೆಸುವಂತೆ ಹೇಳಿದ್ದಾರೆ. ಇತ್ತ ಭಾರತದ ವಿದೇಶಾಂಗ ಸಚಿವ ಜೈಶಂಕರ್​​ ಜತೆಗೂ ಮಾತನಾಡಿದೆ ಎಂದು ಹೇಳಿದೆ. ಈ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆಯ ಪತ್ರಿಕಾ ಹೇಳಿಕೆ ನೀಡಿದೆ.

ಪಾಕಿಸ್ತಾನ ಮತ್ತು ಭಾರತ ನಡುವಿನ ತಪ್ಪು ಲೆಕ್ಕಾಚಾರ ತಪ್ಪಿಸಲು ಹಾಗೂ ದಾಳಿಯನ್ನು ನಿಲ್ಲಿಸಲು ನೇರ ಸಂವಹನದ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಎರಡು ದೇಶಗಳು ಒಂದು ನಿಲುವು ತೆಗೆದುಕೊಳ್ಳವಂತೆ ಮನವಿ ಮಾಡಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ/ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ. ಎರಡು ದೇಶಗಳು ಪ್ರಸ್ತುತ ಪರಿಸ್ಥಿತಿಯನ್ನು ಶಮನಗೊಳಿಸಲು ಮತ್ತು ತಪ್ಪು ಲೆಕ್ಕಾಚಾರವನ್ನು ತಪ್ಪಿಸಲು ನೇರ ಸಂವಹನ ಮಾಡಬೇಕಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಭವಿಷ್ಯದ ಸಂಘರ್ಷಗಳನ್ನು ತಪ್ಪಿಸಲು ಹಾಗೂ ಎರಡೂ ದೇಶಗಳ ನಡುವೆ ರಚನಾತ್ಮಕ ಮಾತುಕತೆ ಪ್ರಾರಂಭಿಸಲು ಅಮೆರಿಕದ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್​​ ಜತೆಗೂ ಮಾತನಾಡಿದ್ದಾರೆ. ಹಾಗೂ ಶುಕ್ರವಾರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಜತೆಗೂ ವಿಚಾರವಾಗಿ ಮಾತನಾಡಿದ್ದಾರೆ. ಇಂದು ಬೆಳಿಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೈಶಂಕರ್​​ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಭಾರತದ ವಿಧಾನವು ಯಾವಾಗಲೂ ಕ್ರಮಬದ್ಧವಾಗಿರುವುದು ಮತ್ತು ಜವಾಬ್ದಾರಿಯುತವಾಗಿದೆ ಹಾಗೂ ಅದು ಇವತ್ತಿಗೂ ಹಾಗೆಯೇ ಉಳಿದಿದೆ ಎಂದು ಜೈಶಂಕರ್​​​ ಹೇಳಿದ್ದಾರೆ.

ಇದಕ್ಕೂ ಮುನ್ನ, ಅಮೆರಿಕದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್, ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ಯಾವಾಗಲೂ ಸಿದ್ಧವಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಎರಡೂ ರಾಷ್ಟ್ರಗಳ ನಾಯಕರೊಂದಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದೆ. ಅಮೆರಿಕದ ಅಧ್ಯಕ್ಷರು ಕೂಡ ಈ ಉದ್ವಿಗ್ನತೆಯನ್ನು ಆದಷ್ಟು ಬೇಗ ಕಡಿಮೆ ಮಾಡಲು ಬಯಸುತ್ತಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಶನಿವಾರ ಭಾರತದಾದ್ಯಂತ 26 ಸ್ಥಳಗಳ ಮೇಲೆ ದಾಳಿ ಮಾಡಿದ ತಕ್ಷಣ ಭಾರತ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದ್ದರೂ ಸಹ, ಉದ್ವಿಗ್ನತೆಯನ್ನು ಶಮನಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ANI ಗೆ ತಿಳಿಸಿವೆ. ನಿಯಂತ್ರಣ ರೇಖೆಯ (LoC) ಹಲವಾರು ಸ್ಥಳಗಳಲ್ಲಿ ಇನ್ನೂ ಗುಂಡಿನ ದಾಳಿ ನಡೆಯುತ್ತಿದೆ.ಶನಿವಾರ ಬೆಳಗಿನ ಜಾವ ಭಾರತೀಯ ವಾಯುದಾಳಿಗಳು ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿವೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಪಾಕಿಸ್ತಾನ ಸೇನೆಯು ಮುಂಚೂಣಿ ಪ್ರದೇಶಗಳ ಕಡೆಗೆ ಸೈನ್ಯವನ್ನು ಸ್ಥಳಾಂತರಿಸುತ್ತಿದೆ ಎಂದು ಹೇಳಿದ್ದಾರೆ. ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪ್ರಮಾಣಾನುಗುಣ ಪ್ರತಿಕ್ರಿಯೆಗಳೊಂದಿಗೆ ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಎಂದು ವಿಂಗ್ ಕಮಾಂಡರ್ ಸಿಂಗ್ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button