
ಕೊಳ್ಳೇಗಾಲ ನಗರಸಭೆಯಲ್ಲಿ ಸಾರ್ವಜನಿಕರ ಆಸ್ತಿಗಳಿಗೆ ಎ-ಖಾತೆ ಮತ್ತು ಬಿ-ಖಾತಾ ಮಾಡುಕೊಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಪ್ರತಿಭಟನೆ ನಡೆಸಲಾಯಿತು ನಗರಸಭೆ ಕಚೇರಿಯ ಮುಂಭಾಗದಲ್ಲಿ ಕೆ.ಅರ್.ಎಸ್ ಪಕ್ಷದ ಮುಖಂಡರು ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆ ಪ್ರಭಾರ ಪೌರಯುಕ್ತ ಪರಶಿವ ಆಗಮಿಸಿ ಸೋಮವಾರದಿಂದ ಖಾತೆ ನೀಡಲು ಕ್ರಮ ಜರುಗಸಲಾಗುವುದು ಎಂದು ಭರವಸೆ ನೀಡಿದ್ದ ಮೇರೆಗೆ ಪ್ರತಿಭಟನೆಯನ್ನು ಕೈಬಿಡಲಾಯಿತು
ಪ್ರತಿಭಟನೆಯಲ್ಲಿ ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಗಣೇಶ್, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್, ಮಧುನಾಯಕ ಇದ್ದರು