ಪಾಕ್ ಮೇಲೆ ಏರ್ಸ್ಟ್ರೈಕ್ ಬೆನ್ನಲ್ಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ಮುಂಬೈ: ಇಂಡಿಗೋ(IndiGo) ವಿಮಾನವನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ಬಂದಿದೆ. ಅತ್ತ ಪಾಕಿಸ್ತಾನ(Pakistan)ದ ಮೇಲೆ ಭಾರತ ದಾಳಿ ಮಾಡಿದ ಬಳಿಕ ಈ ಘಟನೆ ನಡೆದಿದೆ. ಮುಂಬೈ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ.ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಇದು ನಡೆದಿದೆ. ಅಧಿಕಾರಿಗಳು ತುರ್ತು ಕ್ರಮ ಕೈಗೊಂಡಿದ್ದು, ಭದ್ರತಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನ 9 ಉಗ್ರರ ನೆಲೆ ಮೇಲೆ ದಾಳಿ ನಡೆಸಿದೆ. 100ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಯಾವುದೇ ಅಧಿಕೃತ ಹೇಳಿಕೆಗಳು ಇನ್ನೂ ಹೊರಬಂದಿಲ್ಲ.ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡಿತ್ತು.
ಆಪರೇಷನ್ ಸಿಂಧೂರ್ ನಂತರ, ಭಾರತೀಯ ವಾಯುಪ್ರದೇಶವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಮತ್ತು ಪರಿಸ್ಥಿತಿಯನ್ನು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಕರೆದವು. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬೆಳವಣಿಗೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸರ್ಕಾರಿ ಮೂಲಗಳ ಪ್ರಕಾರ ಪ್ರಯಾಣಿಕರ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ ಎಂದು ಒತ್ತಿ ಹೇಳುತ್ತದೆ.
ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಗೆ ಹೋಗುವ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಇಂದು ಶ್ರೀನಗರ ವಿಮಾನ ನಿಲ್ದಾಣದಿಂದ ಯಾವುದೇ ಪ್ರಯಾಣಿಕ ವಿಮಾನಗಳು ಕಾರ್ಯನಿರ್ವಹಿಸುವುದಿಲ್ಲ. ಇಂದಿನ ಎಲ್ಲಾ ವಿಮಾನಗಳನ್ನು ರದ್ದುಪಡಿಸಲಾಗಿದೆ. ಏತನ್ಮಧ್ಯೆ, ಇಂಡಿಗೊ ಏರ್‌ಲೈನ್ಸ್ ಕೂಡ ಪ್ರಯಾಣ ಪ್ರಕಟಣೆ ಹೊರಡಿಸಿದೆ. ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ಅಧಿಕೃತ ಪ್ರಕಟಣೆ ತಿಳಿಸಿದೆ.ವಿಮಾನ ನಿಲ್ದಾಣ ತಲುಪುವ ಮೊದಲು ಪ್ರಯಾಣಿಕರು ಇಂಡಿಗೊದ ವೆಬ್‌ಸೈಟ್‌ನಲ್ಲಿ ಅಪ್ಡೇಟ್ಗಳನ್ನು ತಿಳಿದುಕೊಮಡು ಬರಬೇಕು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಬಿಕಾನೆರ್‌ಗೆ ತೆರಳಿದ ಮತ್ತು ಅಲ್ಲಿಂದ ಹೊರಡುವ ವಿಮಾನಗಳ ಮೇಲೆ ವೈಮಾನಿಕ ನಿರ್ಬಂಧಗಳು ಪರಿಣಾಮ ಬೀರುತ್ತವೆ ಎಂದು ಇಂಡಿಗೋ ಏರ್‌ಲೈನ್ಸ್ ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದೆ. ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಏರ್ಲೈನ್ಸ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ವಿನಂತಿಸುತ್ತೇವೆ . ಮಂಗಳವಾರ ಸಂಜೆ ಭಾರತ ಸರ್ಕಾರವು ಪಾಕಿಸ್ತಾನ ಗಡಿಯಲ್ಲಿ ವೈಮಾನಿಕ ಕಾರ್ಯಾಚರಣೆಗಾಗಿ ನೋಟಾಮ್ (NOTAM) ಹೊರಡಿಸಿತ್ತು ಎಂದು ಇಂಡಿಗೋ ತಿಳಿಸಿದೆ.