ಇತ್ತೀಚಿನ ಸುದ್ದಿ
Trending

ಕರ್ನಾಟಕದಾದ್ಯಂತ 7 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ಬೆಂಗಳೂರು, ಮೇ 15: ಕರ್ನಾಟಕದಾದ್ಯಂತ (Karnataka) ಬೆಳ್ಳಂಬೆಳಗ್ಗೆ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದೆ. ಆ ಮೂಲಕ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್​ ನೀಡಲಾಗಿದೆ.

ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ.

ಯಾರ ಮೇಲೆ ದಾಳಿ?

  • ರಾಜಶೇಖರ್: ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ತುಮಕೂರು.
  • ಮಂಜುನಾಥ್: ಸರ್ವೆ ಸೂಪರ್ವೈಸರ್, ಮಂಗಳೂರು.
  • ಶ್ರೀಮತಿ ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ.
  • ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು.
  • ಹೆಚ್​ಆರ್ ನಟರಾಜ್: ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ ಬೆಂಗಳೂರು.
  • ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಛೇರಿ ಬೆಂಗಳೂರು ಗ್ರಾಮಾಂತರ.
  • ಉಮಾಕಾಂತ್: ಶಹಾಪುರ ತಾಲೂಕು ಕಚೇರಿ ಯಾದಗಿರಿ.

ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಉಮಾಕಾಂತ ಹಳ್ಳೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಎಂಡಿ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ಇನ್ನು ವಿಜಯಪುರ ‌ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್​​ಪಿ ಟಿ. ಮಲ್ಲೇಶ್​ ಹಾಗೂ‌ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.ಅತ್ತ ಸೊಲ್ಲಾಪುರ ನಗರದ ಕೆಹೆಚ್​​ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್​​ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ಎಸ್​ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ‌ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ ಮಾಡಿದೆ.

Related Articles

Leave a Reply

Your email address will not be published. Required fields are marked *

Back to top button