
ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಏಳು ಜಿಲ್ಲೆಗಳಲ್ಲಿ ಅಂದರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸಾಧಾರಣ ಮಳೆ ನಿರೀಕ್ಷೆ : ಬೀದರ್, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ : ಅಂಕೋಲಾ, ಸುಳ್ಯ, ಗೋಕರ್ಣ, ಮಾಣಿ, ಸಿದ್ದಾಪುರ ಲೋಂಡಾ, ಕಾರವಾರ, ಧರ್ಮಸ್ಥಳ, ಬೆಳ್ತಂಗಡಿ, ಮುಲ್ಕಿ, ಕ್ಯಾಸಲ್ರಾಕ್, ಬಂಟ್ವಾಳ, ಕದ್ರಾ, ಕುಂದಾಪುರ, ಕೋಟಾ, ಶಿರಾಲಿ, ಆಗುಂಬೆ, ಮೂಡುಬಿದಿರೆ, ಕಳಸ, ಯಲ್ಲಾಪುರ, ಪುತ್ತೂರು, ಖಾನಾಪುರ, ಭಾಗಮಂಡಲ, ಕಮ್ಮರಡಿ, ಹೊನ್ನಾವರ, ಬನವಾಸಿ, ಜೋಯ್ಡಾ, ನಾಪೋಕ್ಲು, ಹಳಿಯಾಳ, ಮುಂಡಗೋಡು, ನಿಪ್ಪಾಣಿ, ಕಿತ್ತೂರು, ಕೊಪ್ಪ, ಪೊನ್ನಂಪೇಟೆ, ಕಿರವತ್ತಿ, ಬೈಲಹೊಂಗಲ, ಧಾರವಾಡ, ಕಲಘಟಗಿ, ಶಿಗ್ಗಾಂವ್, ಧಾರವಾಡ, ಹುಬ್ಬಳ್ಳಿ ಹಾಗೂ ಸೋಮವಾರಪೇಟೆಯಲ್ಲಿ ಮಂಗಳವಾರ ಮಳೆಯಾಗಿದೆ.
ಬೆಂಗಳೂರಿಗೆ ಮಳೆ ಮುನ್ಸೂಚನೆ : ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 
				

