ಇತ್ತೀಚಿನ ಸುದ್ದಿ
Trending

ವಿಧಾನ ಪರಿಷತ್​ಗೆ ನಾಲ್ವರು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್​ ಹೈಕಮಾಂಡ್

ತೀವ್ರ ಹಗ್ಗಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್​ಗೆ ನಾಲ್ಕು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಿದೆ.

ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಕ್ಕಾಗಿ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್​ಐ ಸೆಲ್ ಮುಖ್ಯಸ್ಥೆ ಆರತಿ ಕೃಷ್ಣ, ಹುಬ್ಬಳ್ಳಿ ಧಾರವಾಡ ದಲಿತ ಮುಖಂಡ ಜಕ್ಕಪ್ಪನವರ್ ಹಾಗೂ ಮೈಸೂರು ಮೂಲದ ಪತ್ರಕರ್ತ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದಿನ ಪಟ್ಟಿಗೆ ತೀವ್ರ ವಿರೋಧ: ಆ ಮೂಲಕ ಈ ಮುಂಚೆ ಸೂಚಿಸಲಾಗಿದ್ದ ಹೆಸರುಗಳಾದ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಿ.ಜಿ.ಸಾಗರ್ ಹೆಸರನ್ನು ಕೈಬಿಡಲಾಗಿದೆ. ಎರಡು ತಿಂಗಳ ಹಿಂದೆ ಕೆಪಿಸಿಸಿ ಮಾಧ್ಯಮ ಘಟಕ ಅಧ್ಯಕ್ಷ ರಮೇಶ್ ಬಾಬು, ಎನ್ಆರ್​ಐ ಸೆಲ್ ಮುಖ್ಯಸ್ಥೆ ಆರತಿ ಕೃಷ್ಣ, ಪಕ್ಷದ ಮುಖಂಡ ಡಿ.ಜಿ.ಸಾಗರ್ ಹಾಗೂ ದಿನೇಶ್ ಅಮೀನ್ ಮಟ್ಟು ಅವರ ಹೆಸರಿರುವ ಪಟ್ಟಿಯನ್ನು ಕಳುಹಿಸಿಕೊಡಲಾಗಿತ್ತು. ಆದರೆ, ಇದಕ್ಕೆ ರಾಜ್ಯ ಕಾಂಗ್ರೆಸ್​​ನ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇಬ್ಬರನ್ನು ಕೈಬಿಟ್ಟ ಹೈಕಮಾಂಡ್: ನಾಮನಿರ್ದೇಶನ ಮಾಡಲು ಅನುಮೋದಿಸಿರುವ ಈ ಹಿಂದಿನ ಹೆಸರುಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್‌ನ ಕೆಲವು ನಾಯಕರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಹೈಕಮಾಂಡ್ ವಿಧಾನ ಪರಿಷತ್ತಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಇದೀಗ ಈ ಹಿಂದಿನ ಪಟ್ಟಿಯಲ್ಲಿನ ಇಬ್ಬರನ್ನು ಕೈಬಿಟ್ಟು ಪರಿಷ್ಕೃತ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button