ಇತ್ತೀಚಿನ ಸುದ್ದಿ
Trending

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೇತಮಂಗಲ : ದೇಹದ ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್​ಟಿ ಸಡಲೀಕರಣ ಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.

ಗ್ರಾಮದ ಸಮೀಪದ ಸುಂದರಪಾಳ್ಯ ಗ್ರಾಮದಲ್ಲಿ ಬಿಜೆಪಿ ಕೆಜಿಎಫ್ ಗ್ರಾಮಾಂತರ ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್ ಶರ್ಮ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸುವ ಮೂಲಕ ಸಂತಸವನ್ನು ವ್ಯಕ್ತಪಡಿಸಿದರು.

ಈ ವೇಳೆ ಗ್ರಾಮಾಂತರ ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್ ಶರ್ಮ ಮಾತನಾಡಿ. ದೇಹದ ಜನತೆಗೆ ದಸರಾ ಹಬ್ಬದ ಕೊಡುಗೆಯಾಗಿ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಜಿ ಎಸ್ ಟಿ ತೆರಿಗೆಯನ್ನು ಅಗತ್ಯ ವಸ್ತುಗಳ ಮೇಲೆ ಕಡಿಮೆ ಮಾಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ. ಜಿ ಎಸ್ ಟಿ ತೆರಿಗೆ ಕಡಿಮೆ ಮಾಡಿರುವುದರಿಂದ ಮಾಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ, ಕೇಂದ್ರ ಸರ್ಕಾರದ ಅನೇಕ ಜನಪರ ಯೋಜನೆಗಳಲ್ಲಿ ಇದು ಸಹ ಉತ್ತಮ ಕಾರ್ಯವಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಮಾತನಾಡಿ. ಪ್ರತಿನಿತ್ಯ ಜನರಿಗೆ ಅಗತ್ಯವಾಗಿರುವಂತಹ ದಿನಸಿ ಧಾನ್ಯಗಳು ಹಾಗೂ ಸಣ್ಣ ವಾಹನಗಳ ಮೇಲೆ ತೆರಿಗೆ ಸಡಲಿಕ್ಕೆ ಮಾಡಿರುವುದು ಅತ್ಯಂತ ಸಂತಸ ಸಂಗತಿಯಾಗಿದೆ, ಇದರಿಂದ ಬಡಜನರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿದೆ ಎಂದರು.

ನಾಡ ಹಬ್ಬ ದಸರಾ ಹಬ್ಬಕ್ಕೆ ಕೇಂದ್ರ ಸರ್ಕಾರವು ರಾಜ್ಯದ ಜನತೆಗೆ ಬಂಪರ್ ಕೊಡುಗೆಯಾಗಿ ಜಿಎಸ್‌ಟಿ ತೆರಿಗೆ ಮಾಡಿರುವುದು ಶ್ಲಾಘನೀಯ ಸಂಗತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಮೇಶ್, ಮುಖಂಡರಾದ ಕೇಶವ, ಮುರಳಿ, ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Related Articles

Leave a Reply

Your email address will not be published. Required fields are marked *

Back to top button