ಇತ್ತೀಚಿನ ಸುದ್ದಿ
Trending

ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು, ಕಾಶ್ಮೀರದ ಪೆಹಲ್ಗಾಮ್ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ

ಬೆಂಗಳೂರು:ಜಿಬಿಎ ನೌಕರರ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ನವೆಂಬರ್ 22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ಹತ್ಯೆಯಾದ ಭಾರತಾಂಬೆ ಮಕ್ಕಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಮಾಧ್ಯಮಗೋಷ್ಟಿ ಮತ್ತು ಪೋಸ್ಟರ್ ಬಿಡುಗಡೆ ಸಮಾರಂಭದ ಕುರಿತು ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕನ್ನಡ ಭಾಷೆಗೆ 2500ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆ ಲಿಪಿಗಳ ರಾಣಿ ಎಂಬ ಬಿರುದಾಂಕಿತವಾಗಿದೆ.

ಕನ್ನಡ ಭಾಷೆ ಉಳಿಸಿ, ಬೆಳಸಬೇಕು ವಿಶ್ವಭಾಷೆಯಾಗಿ ಮಾಡಬೇಕು ಉದ್ದೇಶದಿಂದ ಪ್ರಥಮ ಬಾರಿಗೆ 2022ರಲ್ಲಿ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ನಂತರ 2023ರಲ್ಲಿ ನೇಪಾಳ ಪಶುಪತಿ ದೇವಾಲಯ ಸನ್ನಿಧಾನದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು 2024ರಲ್ಲಿ ಹರಿದ್ವಾರದಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಇದೀಗ 2025ರ ನವೆಂಬರ್ 22ಸಂಜೆ 4ಗಂಟೆಗೆ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಹತ್ಯೆಯಾದವರಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಸಾಧಕರಿಗೆ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಬಿಎ ಅಧಿಕಾರಿ, ನೌಕರರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾಜಿ ಮಹಾಪೌರರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಆರ್.ಸಂಪತ್ ರಾಜ್ ರವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು, ಮಾಜಿ ಮಹಾಪೌರರಾದ ಎಂ.ಗೌತಮ್ ಕುಮಾರ್ ರವರು, ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಆರತಿ ಹೆಚ್.ಎನ್ ರವರು ಮತ್ತು ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗರವರು, ವಕೀಲರಾದ ವಿ.ಶ್ರೀನಿವಾಸ್ ರವರು ಉದ್ಘಾಟನೆ ನೇರವೆರಿಸುವರು.

ನಮ್ಮ ಸಂಘದ ಪಹಲ್ಲಾಮ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಡಳಿತಧಿಕಾರಿ ತುಷಾರ್ ಗಿರಿನಾಥ್ ರವರು ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಕೆ.ಜಿ.ರವಿ, ಕೆ.ಮಂಜೇಗೌಡ, ಹೆಚ್.ಬಿ.ಹರೀಶ್ , ಮಾರ್ಕಟ್ ಮಂಜುನಾಥ್ , ಎಸ್.ಜಿ.ಸುರೇಶ್ ಸಂತೋಷ್ ಕುಮಾರ್ ನಾಯ್ಕ್, ಎಸ್.ಎನ್.ಸೋಮಶೇಖರ್ , ಎಲ್.ಆರ್, ಮಂಜುನಾಥ್, ನರಸಿಂಹ, ಶ್ರೀಧರ್,ಡಾ||ಶೋಭ,ರೇಣುಕಾಂಬ, ವಾಣಿ , ಮಹದೇವಿ,ಅಕ್ಕಮಹದೇವಿರವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button