
ವಾಷಿಂಗ್ಟನ್: ಬಾಂಗ್ಲಾದೇಶದ (Bangldesh) ವಿಚಾರವನ್ನು ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಬಿಡುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ.
ಶ್ವೇತಭವನದಲ್ಲಿ (White House) ಟ್ರಂಪ್ ಅವರನ್ನು ಮೋದಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು.
ನಂತರ ಮಾಧ್ಯಮಗಳ ಜೊತೆ ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಸರ್ಕಾರ ಬದಲಾವಣೆಯಲ್ಲಿ ಅಮೆರಿಕದ ಡೀಪ್ ಸ್ಟೇಟ್ ಪಾತ್ರವಿದೆಯೇ ಎಂಬ ಪ್ರಶ್ನೆಗೆ ಟ್ರಂಪ್, ಇದರಲ್ಲಿ ಡೀಪ್ ಸ್ಟೇಟ್ ಪಾತ್ರವಿಲ್ಲ. ಈ ವಿಚಾರದಲ್ಲಿ ಮೋದಿಯವರು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾನು ಮೋದಿ ಅವರಿಗೆ ಬಿಡುತ್ತೇನೆ ಎಂದು ತಿಳಿಸಿದರು.