
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ (Gold Smugling) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಕೋರಿ ಹೈಕೋರ್ಟ್ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾದಲ್ಲಿದ್ದಾರೆ.ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ನಟಿ ರನ್ಯಾ ರಾವ್ಗೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನಟಿ ರನ್ಯಾ ರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಟಿ ರನ್ಯಾ ರಾವ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ರನ್ಯಾ ಸಂಬಂಧಿ ಅಕುಲಾ ಅನುರಾಧ ದೂರು, ನೀಡಿದ್ದು ಎಫ್ಐಆರ್ ದಾಖಲಿಸಲಾಗಿತ್ತು. ಎಫ್ಐಆರ್ ರದ್ದು ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲು ಏರಿದ್ದರು.ಇದೀಗ, ಹೈಕೋರ್ಟ್ ಯತ್ನಾಳ್ ವಿರುದ್ಧದ ಎಫ್ಐಆರ್ಗೆ ಏಪ್ರಿಲ್ 28ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿನ್ಎಸ್ ಸೆಕ್ಷನ್ 79 ಅನ್ವಯವಾಗುವುದಿಲ್ಲವೆಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.
ನಟಿ ರನ್ಯಾ ರಾವ್ ಅವರು ಪೊಲೀಸ್ ಪ್ರೋಟೋಕಾಲ್ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಸಲ್ಲಿಸಿರುವ ವರದಿಯಲ್ಲಿ ದೃಢವಾಗಿದೆ. ಮಲತಂದೆ, ಡಿಜಿಪಿ ರಾಮಚಂದ್ರರಾವ್ ಅವರು ತನ್ನ ಮಗಳಿಗಾಗಿ ಪೊಲೀಸ್ ಪ್ರೋಟೋಕಾಲ್ ದುಪಯೋಗ ಪಡಿಸಿಕೊಂಡಿರುವುದು ಸಾಕ್ಷಿಗಳ ದೃಢವಾಗಿದೆ. ಪ್ರೋಟೋಕಾಲ್ ದುರುಪಯೋಗದ ತನಿಖಾ ವರದಿಯನ್ನು ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ.