ಇತ್ತೀಚಿನ ಸುದ್ದಿ
Trending

ಕೊಡಗಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

ಮಡಿಕೇರಿ: ಹಿಂದೆಲ್ಲಾ ಎಂತಹ ರಣ ಭೀಕರ ಮಳೆ, ಗುಡುಗು ಸಿಡಿಲು ಬಂದರೂ ಕೂಡ ಕೊಡಗು (Kodagu) ಜಿಲ್ಲೆಯ ಜನ ಅಂಜುತ್ತಿರಲಿಲ್ಲ. ಆದರೆ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗಿಗೆ ಕೊಡಗು ಜನತೆಯನ್ನು ಅಕ್ಷರಶಃ ನಡುಗುವಂತೆ ಮಾಡಿತ್ತು. ಸಣ್ಣ ಮಳೆ (Kodagu Rain) ಗುಡುಗು ಬಂದರೂ ಜನ ಹೆದರುವಂತೆ ಮಾಡಿತ್ತು. ಕಳೆದ ಎರಡು ವರ್ಷಗಳಲ್ಲಿ ಭಾರಿ ಸಮಸ್ಯೆ ಏನೂ ಆಗಿಲ್ಲ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಆಡಳಿತಕ್ಕೆ ಒಂದು ವರದಿ ಸಲ್ಲಿಸಿದ್ದು, ಇದು ಕೂಡ ಜನತೆಯ ಆತಂಕ ಹೆಚ್ಚಿಸಿದೆ. ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯದ ಸಾಧ್ಯತೆ ಇದೆ ಎಂದು ಅವರು ವರದಿಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಕೊಡಗಿನಲ್ಲಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದೀಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.ತಜ್ಞರ ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಕೂಡ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಹೇಳಿದ ಆ ಪ್ರದೇಶಗಳಲ್ಲಿ ಏನಾದರೂ ಬದಲಾವಣೆಗಳು ಕಾಣಿಸುತ್ತಿವೆಯಾ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ.ತಜ್ಞರು ಎಚ್ಚರಿಕೆ ನೀಡಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಸುಲಭವಾಗಿ ಲಭ್ಯವರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ‌ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಈಗಲೇ ನೆಮಿಸಿಕೊಳ್ಳಲಾಗಿದೆ. ಜೊತೆಗೆ ಸಂಭಾವ್ಯ ಪ್ರವಾಹ ಎದುರಾಗುವ ಏರಿಯಾದ ಸುತ್ತ ಮುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದೇ ತಿಂಗಳು 27 ರಂದು ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಇದಾದ ಮೂರರಿಂದ ನಾಲ್ಕು ದಿನಗಳಲ್ಲಿ ಮುಂಗಾರು ಮಳೆ ಕೊಡಗು ಪ್ರವೇಶಿಸುತ್ತದೆ. ಹಾಗಾಗಿ ಜೂನ್ ಮೊದಲ ವಾರದಿಂದಲೇ ವರುಣಾರ್ಭಟ ನಿರೀಕ್ಷಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button