
ಕೆ ಆರ್ ಪೇಟೆ ಉತ್ತಮ ಆರೋಗ್ಯ ಭಾಗ್ಯವಿದ್ದರೆ ಬದುಕಿನಲ್ಲಿ ಏನಾದರೂ ಸಾಧಿಸಬಹುದು. ಇದನ್ನು ಅರಿತು ಪ್ರತಿಯೊಬ್ಬರು ತಮ್ಮ ಆರೋಗ್ಯ ಬಗ್ಗೆ ಉದಾಸೀನ ಮಾಡದೇ ಗಮನ ನೀಡುವಂತೆ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಅಣ್ಣೇಚಾಕನಹಳ್ಳಿ ಗ್ರಾಮದ ನಿವಾಸಿ ಸತೀಶ್ (39) ಎಂಬುವರು ಆನಾರೋಗ್ಯಕ್ಕೆ ಸಿಲುಕಿದ ಹಿನ್ನೆಲೆ ಅವರ ನಿವಾಸಕ್ಕೆ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಿ ಮಾನವೀಯತೆ ಮೆರೆದ ಬಳಿಕ ಮಾತನಾಡಿದ ಅವರು ಆಧುನಿಕ ಬದುಕಿನ ಜಂಜಾಟದಲ್ಲಿರುವ ಮನುಷ್ಯ ತನ್ನ ಆರೋಗ್ಯವನ್ನು ಲೆಕ್ಕಿಸದೆ ಸದಾ ಹಣದ ಹಿಂದೆ ಹೋಗುವ ಪ್ರವೃತ್ತಿ ಬೆಳೆಸಿಕೊಳ್ಳುವ ಮೂಲಕ ತನ್ನ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾನೆ ಇದರಿಂದ ನಾನಾ ರೋಗಗಳಿಗೆ ತುತ್ತಾಗುವ ಮೂಲಕ ನೋವು ಅನುಭವಿಸಲು ಕಾರಣವಾಗಿದೆ ಹಾಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯ ಕಾಂತರಾಜು,ಮುಖಂಡ ಅಶೋಕ್,ಸಂತೋಷ್,ಮಂಜುನಾಥ್, ಆರ್.ಟಿ.ಓ ಮಲ್ಲಿಕಾರ್ಜುನ್ ಆಪ್ತ ಸಹಾಯಕ ಗಂಜಿಗೆರೆ ಮಹೇಶ್ ಸೇರಿದಂತೆ ಉಪಸ್ಥಿತರಿದ್ದರು