ಆರೋಗ್ಯಇತ್ತೀಚಿನ ಸುದ್ದಿವಿಧಾನಸಭೆ

2008ರ ಮುಂಬೈ ಭಯೋತ್ಪಾದಕ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ – ಮೋದಿ ಎದುರೇ ಟ್ರಂಪ್‌ ಘೋಷಣೆ

ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Terror Attack) ಆರೋಪಿ ತಹವ್ವೂರ್‌ ರಾಣಾನನ್ನು (Tahawwur Rana) ಭಾರತಕ್ಕೆ ಹಸ್ತಾಂತರಿಸಲು ಅಮೆರಿ ಒಪ್ಪಿಕೊಂಡಿದೆ. ಪ್ರಧಾನಿ ಮೋದಿ ಎದುರಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ‌ಈ ಘೋಷಣೆ ಮಾಡಿದ್ದಾರೆ.

ಪ್ರಧಾನಿ ಮೋದಿ (PM Modi) ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ (Donald Trump) ಅಧಿಕಾರ ವಹಿಸಿಕೊಂಡ ಬಳಿಕ ಇದು ಮೋದಿ ಅವರ ಮೊದಲ ಭೇಟಿ.

ಪ್ರಧಾನಿ ಮೋದಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಂತರ, ಮುಂಬೈ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ. ನಾವು 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ಅತ್ಯಂತ ಅಪಾಯಕಾರಿ ವ್ಯಕ್ತಿಯನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದೇವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

26/11 ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಪ್ರಸ್ತುತ ಅಮೆರಿಕದಲ್ಲಿ ಹೆಚ್ಚಿನ ಭದ್ರತೆಯ ಜೈಲಿನಲ್ಲಿದ್ದಾನೆ. ಭಾರತ ಹಲವು ವರ್ಷಗಳಿಂದ ಆತನನ್ನು ಹಸ್ತಾಂತರಿಸುವಂತೆ ಕೋರುತ್ತಿದೆ.

Related Articles

Leave a Reply

Your email address will not be published. Required fields are marked *

Back to top button